nellitheertha.com Blog

ಪರಿವಾರ ದೇವತೆಗಳು ಮತ್ತು ದೈವಗಳು
ಶ್ರೀ ಮಹಾಗಣಪತಿ

ಶ್ರೀ ಮಹಾಗಣಪತಿ ದೇವಳವು ಮುಖ್ಯ ದೇವಸ್ಥಾನದ ಒಳಾಂಗಣದಲ್ಲಿ ನೈರುತ್ಯ ಭಾಗದಲ್ಲಿದ್ದು ಪ್ರತ್ಯೇಕ ಗುಡಿಯನ್ನು ಹೊಂದಿರುತ್ತದೆ. ಶ್ರೀ ಗಣಪತಿ ದೇವರಿಗೆ ಗಣಹೋಮ, ಸಂಕಷ್ಟಚತುರ್ಥಿ ಪೂಜೆ, ಅಪ್ಪದ ಪೂಜೆ, ಕಜ್ಜಾಯ ಹರಕೆಯಾಗಿ ನಡೆಸಲ್ಪಡುತ್ತದೆ.

ವ್ಯಾಘ್ರಚಾಮುಂಡಿ

ವ್ಯಾಘ್ರಚಾಮುಂಡಿ, ಶ್ರೀಕ್ಷೇತ್ರದ ಮತ್ತು ಊರಿನ ಪ್ರಧಾನ ದೈವ. ತುಳುವಿನಲ್ಲಿ ರಾಜನ್‍ದೈವ ಎಂದು ಮನ್ನಣೆಯನ್ನು ಪಡೆದಿರುವ ಈಕೆ ದೇವಾಸ್ಥಾನದ ಆಗ್ನೇಯ ದಿಕ್ಕಿನಲ್ಲಿದ್ದು ಭಕ್ತಾಭೀಷ್ಟಪ್ರದಾಯಕಿಯಾಗಿದ್ದಾಳೆ. ನಿತ್ಯ ಪೂಜೆಯೊಂದಿಗೆ ಶುಕ್ರವಾರದಂದು ಹೂವಿನ ಪೂಜೆ, ಅಗೆಲುಸೇವೆ ಹರಕೆಯಾಗಿ ಸಲ್ಲಿಸಲ್ಪಡುತ್ತವೆ. ವಾರ್ಷಿಕ ಉತ್ಸವದ ಸಮಯ ಶ್ರೀ ದೇವರ ಚೂರ್ಣೋತ್ಸವದ ಸಂದರ್ಭ, ಊರವರ ಸಮ್ಮುಖದಲ್ಲಿ ದರ್ಶನ ಪಾತ್ರಿಯ ಮೈಮೇಲೆ ವ್ಯಾಘ್ರಚಾಮುಂಡಿಯನ್ನು ಆಹ್ವಾನಿಸಿದಾಗ ಶ್ರೀ ದೇವರ ಭೇಟಿಗೆ ತೆರೆಳುವ ವ್ಯಾಘ್ರಚಾಮುಂಡಿ ಮಹಾಪ್ರಸಾದದೊಂದಿಗೆ ಭಕ್ತಾದಿಗಳನ್ನು ಹರಸುವುದು ಅನುಚಾನವಾಗಿ ನಡೆದುಕೊಂಡು ಬರುತ್ತಿದೆ. ಹಾಗೆಯೇ ಧ್ವಜಾವರೋಹಣದ ಮಾರನೇ ದಿವಸ ವ್ಯಾಘ್ರಚಾಮುಂಡಿ ನೇಮೋತ್ಸವವು ವಿಜೃಂಭಣೆಯಿಂದ ನಡೆಯುತ್ತದೆ. ಇದಲ್ಲದೆ ಧೂಮಾವತಿ, ರಕ್ತೇಶ್ವರಿ, ಕಾಂತರಧೂಮಾವತಿ, ಬಂಟ, ವ್ಯಾಘ್ರಚಾಮುಂಡಿ ಬಂಟ, ಸರಳಧೂಮಾವತಿ ಎಂಬ ಇತರ ಆರು ದೈವಗಳು ಪೂಜಿಸಲ್ಪಟ್ಟು ನೇಮೋತ್ಸವ ನಡೆಯುತ್ತದೆ.

ಮಹರ್ಷಿ ಜಾಬಾಲಿ

ದೇವಸ್ಥಾನದ ಹೊರಾಂಗಣದ ಉತ್ತರ ದಿಕ್ಕಿನಲ್ಲಿ ವೃಂದಾವನ ಸ್ವರೂಪದಲ್ಲಿ ಮಹರ್ಷಿ ಜಾಬಾಲಿಯು ಕಂಗೊಳಿಸುತ್ತಿದ್ದಾರೆ. ಅಲ್ಲದೆ ಈ ವೃಂದಾವನದ ಇತರ ಮೂರು ದಿಕ್ಕುಗಳಲ್ಲಿ ಅವರ ಆರಾಧ್ಯ ದೇವರುಗಳಾದ ಶ್ರೀ ಮಹಾಗಣಪತಿ, ಪಾರ್ವತಿ, ಮಹೇಶ್ವರರು ಪೂಜಿಸಲ್ಪಡುತ್ತಿದ್ದು ಬಹಳ ಕಾರಣೀಕದ ಪೀಠವಾಗಿದೆ. ಗುಹೆಯೊಳಗೆ ತೀರ್ಥಸ್ನಾನ ಮಾಡಿ ಜಾಬಾಲೇಶ್ವರನನ್ನು ಅರ್ಚಿಸಿ ಮಹರ್ಷಿಗಳ ಸನ್ನಿಧಾನದಲ್ಲಿ ಫಲಸಮರ್ಪಣೆ ಮಾಡಿ, ಪ್ರಾರ್ಥಿಸಿಕೊಂಡಾಗ ಮನಸ್ಸಿನಲ್ಲಿ ಇಚ್ಚಿಸಿದ ಕಾರ್ಯವು ಕ್ಷಿಪ್ರವಾಗಿ ಈಡೇರುತ್ತಿರುವುದು ಇಲ್ಲಿಯ ಸ್ಥಳ ವಿಶೇಷ.

ಮಹರ್ಷಿ ಜಾಬಾಲಿಗಳು ಕಾಶೀ ವಿಶ್ವನಾಥನ ಸನ್ನಿಧಿಯಿಂದ ಬಂದು ಅಂದು ಬಿಲ್ವ ವನವೆಂದು ಪ್ರಸಿದ್ಧಿಯಾದ (ನಿರ್ಜರಾರಣ್ಯ - ಕಟೀಲು ಕ್ಷೇತ್ರ) ನೆಲ್ಲಿತೀರ್ಥದ ಗುಹೆಯಲ್ಲಿ ತಪಸ್ಸನ್ನಾಚರಿಸಿ ಜನರ ಕಷ್ಟಸುಖಗಳಿಗೆ ಸ್ಪಂದಿಸಿ ನಂದಿನಿಯನ್ನು ನದಿಯಾಗಿ ಹರಿಸಿ ಈ ಪ್ರದೇಶದ ಕ್ಷಾಮ ಡಾಮರಗಳನ್ನು ಪರಿಹರಿಸಿ ಮುಂದಕ್ಕೆ ಅರುಣಾಸುರ ವಧೆಗೆ ಕಾರಣೀಭೂತರಾದ ಮಹಾಮಹಿಮರು ಇವರು. ಇಂದಿಗೂ ಗುಹೆಯಲ್ಲಿ ತಪಸ್ಸನ್ನಾಚರಿಸುತ್ತ ಭಕ್ತರ ಇಷ್ಟಾರ್ಥವನ್ನು ಈಡೇರಿಸುವ ಕಾಮಧೇನುವಾಗಿದ್ದಾರೆ ಎಂಬುದು ಹಿಂದಿನಿಂದ ಬಂದ ನಂಬಿಕೆ.

ಕ್ಷೇತ್ರಪಾಲ - ಕ್ಷೇತ್ರ ಉಲ್ಲಾಯ

ದೇವಸ್ಥಾನದ ಮುಂಭಾಗದಲ್ಲಿ ಇರುವ ದೈವಕ್ಷೇತ್ರ ಉಲ್ಲಾಯ. ಕ್ಷೇತ್ರರಕ್ಷಕನಾದ ಈತನಿಗೆ ಅವಭೃತ (ಆರಾಟ) ದಿವಸ ವಿಶಿಷ್ಟ ರೀತಿಯ ನೇಮೋತ್ಸವ ನಡೆಯುತ್ತದೆ. ವಿಚಿತ್ರ ಸಂಪ್ರದಾಯದಿಂದ ಕೂಡಿದ ಈ ನೇಮವು ಮಹಾರಾಜನು ಅಧಿಕಾರಿಗಳನ್ನು ಪ್ರಶ್ನಿಸುವ ರೀತಿಯಲ್ಲಿ ಇದ್ದು, ಆತನ ವೇಷಭೂಷಣಗಳು ಇದನ್ನು ಪುಷ್ಟೀಕರಿಸುತ್ತವೆ. ಮುಖದಲ್ಲಿ ಮೀಸೆಯನ್ನು ಹೊತ್ತು ಧನುರ್ಧಾರಿಯಾಗಿ ದೇವರು ಸ್ನಾನಮಾಡಿ ವಿಜೃಂಭಣೆಯಿಂದ ಬರುತ್ತಿರುವಾಗ ಅರ್ಧದಲ್ಲಿ ಅಡ್ಡಗಟ್ಟಿ, ತಂತ್ರಿಗಳನ್ನು ಅಧಿಕಾರಯುತವಾಗಿ ಕೇಳುವ ಮಾತುಗಳು ಬಹುಶಃ ದಕ್ಷಿಣ ಕನ್ನಡದಲ್ಲಿಯೇ ವಿಶಿಷ್ಟ ರೀತಿಯದ್ದಾಗಿದೆ. ’ ತಂತ್ರಿಗಳೇ, ನನ್ನ ದೇವರ ಮೂರು ದಿವಸದ ದೇವಬಲಿ, ಒಂದು ದಿವಸದ ಶ್ರೀ ಭೂತಬಲಿ, ಆರಡ ಅಂಬೋಲಿ ಸರಿಯಾಗಿ ನೆರೆವೇರಿತು ತಾನೆ? ಎರಡು ಪ್ರಶ್ನೆ ಶ್ರೀ ದೇವರ ಅಂದರೆ ನನ್ನ ಉಲ್ಲಾಯ ಒಡೆಯನ ನಿತ್ಯ ಬಲಿ, ನಂದಾದೀಪ ಸಾಂಗವಾಗಿ ನೆರವೇರುತ್ತಾ ಇದೆ ತಾನೆ? ಹಾಗಿದ್ದ ಪಕ್ಷದಲ್ಲಿ ಧ್ವಜಾವರೋಹಣವಾಗಲಿ ಮತ್ತು ನನ್ನ ಒಡೆಯ ಗರ್ಭಗುಡಿ ಪ್ರವೇಶಿಸಲಿ, ನಾನು ನನ್ನ ಗುಡಿ ಸೇರುತ್ತೇನೆ’ ಎನ್ನುತ್ತಾ ಧರಾಶಾಯಿಯಾಗುತ್ತಾನೆ. ಅಲ್ಲಿಗೆ ನೇಮ ಸಮಾಪ್ತಿ.

ನಾಗಬ್ರಹ್ಮರು ಮತ್ತು ದೈವಗಳು

ದೇವಸ್ಥಾನದಿಂದ ವಾಯವ್ಯ ದಿಕ್ಕಿಗೆ ಸುಮಾರು ೨ ಫರ್ಲಾಂಗ್ ದೂರದಲ್ಲಿ ಕಾಡಿನ ಮಧ್ಯೆ ನಾಗಬ್ರಹ್ಮ ಹಾಗೂ ಪರಿವಾರ ದೈವಗಳ ಸಾನ್ನಿಧ್ಯವಿದ್ದು ಜೀರ್ಣೋದ್ಧಾರದ ಹಂತದಲ್ಲಿದೆ. ವರ್ಷಕ್ಕೆ ಎರಡಾವರ್ತಿ ವಾರ್ಷಿಕ ಪೂಜೆಗಳು ನಡೆಯುತ್ತಿದ್ದು, ಬಹಳ ಕಾರಣಿಕ ಸ್ಥಳವಾಗಿರುತ್ತದೆ. ಈ ಸನ್ನಿಧಾನದಲ್ಲಿ ವಾರಾಹಿ, ರಕ್ತೇಶ್ವರಿ, ನಂದಿಗೋಣ, ಕ್ಷೇತ್ರಪಾಲ, ಬೊಬ್ಬರ್ಯ, ಪಾಶಾಣಮೂರ್ತಿ ಎಂಬ ಆರು ದೈವಗಳ ಸಾನ್ನಿಧ್ಯವಿದ್ದು ಇವುಗಳ ಮಧ್ಯೆ ನಾಗಬ್ರಹ್ಮರು ರಾರಾಜಿಸುತ್ತಿದ್ದಾರೆ.

ನೆಲ್ಲಿತೀರ್ಥ ಗುಹಾಲಯ - ಒಂದು ಅನುಭವ
ಕೆಲವು ವರ್ಷಗಳ ಹಿಂದೆ ಶ್ರೀ ನೆಲ್ಲಿತೀರ್ಥ ಸೋಮನಾಥೇಶ್ವರ ದೇವಸ್ಥಾನ ಹಾಗೂ ತೀರ್ಥದ ಅದ್ಭುತ ಗುಹೆಯು ಇತಿಹಾಸದ ಪುಟಗಳಿಗೆ ಮಾತ್ರ ಸೀಮಿತವಾಗುವ ಸಂದರ್ಭ ಎದುರಾದಾಗ ಊರಿನ ಪ್ರಜ್ಞಾವಂತ ವ್ಯಕ್ತಿಗಳು ಎಚ್ಚೆತ್ತು ಈ ಪ್ರಕೃತಿಯ ರಮ್ಯ ತಾಣವನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಲು ಪ್ರಯತ್ನಿಸಿ ಸಫಲರಾದುದು ಈಗ ಇತಿಹಾಸ. ಸುಮಾರು ೫೦ ವರ್ಷಗಳಿಂದ ನಡೆದು ಬಂದ ಹೋರಾಟ, ಎದುರಿಸಿದ ಎಡರು ತೊಡರು ಹಲವಾರು. ಆರ್ಥಿಕವಾಗಿ ತೀರಾ ಹಿಂದುಳಿದ ಈ ಪ್ರದೇಶ, ಅಲ್ಲದೆ ಅನ್ಯಮತೀಯರ ಮಧ್ಯೆ ಮತೀಯ ಸಾಮರಸ್ಯವನ್ನು ಉಳಿಸಿಕೊಳ್ಳುತ್ತಾ ಅವರೆಲ್ಲರ ಸಹಕಾರವನ್ನು ಪಡೆದು ಕಾರ್ಯಸಾಧಿಸಬೇಕಾಗಿದೆ. ಈ ಅದ್ಭುತ ಪ್ರಕೃತಿ ತಾಣವನ್ನು ಹೊರ ಜಗತ್ತಿಗೆ ಪರಿಚಯಿಸುವ ಕೆಲಸ ನಮ್ಮ ನಿಮ್ಮೆಲ್ಲರದ್ದಾಗಿದೆ. ಈ ಪ್ರಕೃತಿಯ ಕೂಸು, ಪ್ರಸಕ್ತ ಕಾಲದಲ್ಲಿ ಮಾನಸಿಕ ನೆಮ್ಮದಿಯನ್ನು ಕೊಡುವ ಅಕ್ಷಯ ಪಾತ್ರೆ ಎಂಬುದರಲ್ಲಿ ಎರಡು ಮಾತಿಲ್ಲ.

ಗೀತೆಯಲ್ಲಿ ಶ್ರ್‍ಈಕೃಷ್ಣನು ಹೇಳಿದ ಮಾತು ’ನನ್ನನ್ನು ಪೂಜಿಸಲು ನಾನೇ ಸೃಷ್ಟಿಸಿದ ವಸ್ತುಗಳಿವೆ. ಪತ್ರ, ಪುಷ್ಪ, ಫಲ, ನೀರು, ಏನನ್ನು ಭಕ್ತಿಯಿಂದ ಸಮರ್ಪಿಸಿದರೂ ನಾನು ಸ್ವೀಕರಿಸುವೆ’. ಆ ಮಾತನ್ನು ಈ ಯುಗದಲ್ಲೂ ನಿಜಗೊಳಿಸಲಿಕ್ಕೇನೆ ಎಂಬಂತೆ ನೆಲ್ಲಿತೀರ್ಥದ ಗುಹಾಲಯ ಬೆಳೆದು ನಿಂತಿದೆ. ಪ್ರಕೃತಿ ಮುಖೇನ ಭಗವಂತನ ಆರಾಧನೆಗೆ ನೆಲ್ಲಿತೀರ್ಥ ಗುಹೆಯಂತಹ ಇನ್ನೊಂದು ತಾಣವಿಲ್ಲ. ಸಾಧಕನ ಆಧ್ಯಾತ್ಮಿಕ ಉನ್ನತಿಗೆ ನೆಲ್ಲಿತೀರ್ಥ ಗುಹಾಲಯ ಭಗವಂತ ನಿರ್ಮಿಸಿದ ಪ್ರಾಕೃತಿಕ ಗುರುಕುಲ.

ನಮ್ಮ ಆಧ್ಯಾತ್ಮಕ್ಕೂ ಸಂಖ್ಯೆ ಹದಿನೆಂಟಕ್ಕೂ ಆಳವಾದ ನಂಟಿದೆ, ಸುಲಭವಾಗಿ ಬಿಚ್ಚಲಾಗದ ಗಂಟಿದೆ. ಹದಿನೆಂಟು ಶಾಸ್ತ್ರ, ಹದಿನೆಂಟು ಪುರಾಣ, ಹದಿನೆಂಟು ದಿವಸಗಳ ಭಾರತದ ಯುದ್ಧ, ಹದಿನೆಂಟು ಅಧ್ಯಾಯಗಳ ಗೀತೆ. ಹೀಗೆಯೇ ಮುಂದುವರಿಯುತ್ತದೆ ಹದಿನೆಂಟರ ಲೆಕ್ಕಾಚಾರ. ಏನಿದು ಹದಿನೆಂಟು? ಈ ಹದಿನೆಂಟೇ ನಮ್ಮ ಧರ್ಮದ ಒಳತಿರುಳು. ಇದುವೇ ವೇದ ಉಪನಿಷತ್ತು ಶಾಸ್ತ್ರ ಪುರಾಣಗಳೆಲ್ಲದರ ಜೀವಸತ್ತ್ವ. ಈ ಹದಿನೆಂಟನ್ನು ತಲುಪಲು ಪ್ರಪಂಚದ ನಾನಾ ಧರ್ಮಗಳು ಮಂತ್ರ ದೃಷ್ಠಾರರೂ ಶ್ರಮಿಸಿದ್ದು ಪರಮ ಸತ್ಯ.

ಈ ಪ್ರಯತ್ನ ಇಂದಿನ ವಿಜ್ಞಾನ ಯುಗದಲ್ಲೂ ಮುಂದುವರಿಯುತ್ತದೆ. ಈ ಹದಿನೆಂಟನೆ ಮೆಟ್ಟಲೇ ಮೋಕ್ಷ. ನಮ್ಮ ವೈದಿಕ ಧರ್ಮದ ಕೊನೆಯ ಮೆಟ್ಟಲು. ಈ ಮೆಟ್ಟಲನ್ನು ಮುಟ್ಟಬೇಕಾದರೆ ಮನುಷ್ಯನು ಮೊದಲಿನ ಹದಿನೇಳು ಮೆಟ್ಟಲುಗಳನ್ನು ಜನ್ಮದಾರಾಭ್ಯ ಏರಬೇಕಾಗಿದೆ. ಅದು ಆಧ್ಯಾತ್ಮಿಕ ಸಾಧನೆಯಿಂದ ಮಾತ್ರ ಸಾಧ್ಯ.

ಅದನ್ನೇ ವೇದ ಉಪನಿಷತ್ತುಗಳು ಸಾರುತ್ತಿರುವುದು. ನೆಲ್ಲಿತೀರ್ಥದ ಪ್ರಕೃತಿ ನಿರ್ಮಿತ ಗುಹೆಯೊಳಗಿನ ಶಿವಲಿಂಗದ ದರ್ಶನವಾಗಬೇಕಾದರೆ ನಾವು ಮೊದಲಿನ ೧೭ ಮೆಟ್ಟಲುಗಳನ್ನು ಹೇಗೆ ಏರಬೇಕು ಎಂಬುದನ್ನು ಅರ್ಥೈಸಿಕೊಂಡಾಗ ಮಾತ್ರ ಮೇಲೆ ಹೇಳಿದ ಸಿದ್ಧಾಂತದ ಒಳಗುಟ್ಟು ತಿಳಿಯುತ್ತದೆ. ದೇವರ ಸಾನ್ನಿಧ್ಯವನ್ನು ತಲುಪಬೇಕಾದರೆ ಗರ್ಭಸ್ಥ ಶಿಶುವಿನಿಂದ ವೃದ್ಧ್ಯಾಪ್ಯದವರೆಗೆ ಮಾಡಬೇಕಾದ ಸಾಧನೆ ಹಾಗೂ ಭಕ್ತಿಯೊಂದಿಗೆ ದೈಹಿಕ ಶ್ರಮಕ್ಕೂ, ಕರ್ಮಕ್ಕೂ ಅಷ್ಟೆ ಪ್ರಾಮುಖ್ಯತೆ ಇವೆ ಎಂದು ಅರಿವಾಗುತ್ತದೆ.

ಗುಹೆಗೆ ಇಳಿಯುವಾಗ ತಾಯಿಯ ಹೊಟ್ಟೆಯಲ್ಲಿನ ಗರ್ಭಾವಸ್ಥೆಯ ಶಿಶುವಿನ ರೀತಿಯಲ್ಲಿ ಕುಳಿತು ಇಳಿಯಬೇಕು. ವಸುಂಧರೆಯ ಗರ್ಭವನ್ನು ಪ್ರವೇಶಿಸಿದಂತೆ ನಾವು ಮುಂದಕ್ಕೆ ಶಿಶುವಿನ ಜನನದಾರಭ್ಯ ವಿವಿಧ ಬೆಳವಣಿಗೆಯ ಹಂತದ ರೀತಿಯಲ್ಲಿ ಅಂದರೆ ಹೊಟ್ಟೆ ಊರಿ ಎಳೆದು ಮುಂದೆ ಹೋಗುವುದರಿಂದ ಕುಕ್ಕುರುಗಾಲು, ಅಂಬೆಗಾಲು ಇಡುವವರೆಗೆ ನಾನಾ ರೀತಿಯ ಅವಸ್ಥೆಗಳಲ್ಲಿ ಮುಂದುವರಿಯಬೇಕಾಗುತ್ತದೆ.

ಮನುಷ್ಯನ ಆಯುಷ್ಯ ಪ್ರಮಾಣ ೧೨೦ ವರ್ಷ ಎಂದಾದರೆ ಸಾಮಾನ್ಯವಾಗಿ ೨೦ರಿಂದ ೫೦ರ ೩೦ ವರುಷಗಳನ್ನು ಜೀವನದ ಸಾಧನೆಯ ಕಾಲವೆಂದು ಅರ್ಥೈಸಬಹುದು. ಈ ಪ್ರಕಾರ ನಮಗೆ ಸುಮಾರು ೨೫ ವರುಷಗಳಾದಾಗ ಭವಿಷ್ಯದ ಬದುಕನ್ನು ಬೃಹದಾಕಾರವಾಗಿ ನೋಡುವ ಹಂತಕ್ಕೆ ತಲುಪಿರುತ್ತೇವೆ. ಅಂತೆಯೇ ಗುಹೆಯ ಮಧ್ಯಭಾಗಕ್ಕೆ ಬಂದಾಗ ಅದು ನಮಗೆ ಬೃಹದಾಕಾರವಾಗಿ ಕಾಣಿಸ ತೊಡಗುತ್ತದೆ. ಅದರ ಒಳಗೆ ಒಂದು ಚಿಕ್ಕ ಗುಡ್ಡವಿದ್ದು ನಂತರ ಅದನ್ನು ಏರಬೇಕಾಗಿದೆ. ಅದನ್ನು ನಮ್ಮ ಜೀವನದ ಸಾಧನೆಯ ಕಾಲಕ್ಕೆ ಹೋಲಿಸಬಹುದು. ಅದರ ತುದಿ ಮುಟ್ಟಿದಾಗ ೬೦ರ ಅನುಭವ. ಅದು ಷಷ್ಠಪೂರ್ತಿ. ನಮ್ಮ ವ್ಯವಹಾರಗಳನ್ನು ಮಕ್ಕಳಿಗೆ ಬಿಟ್ಟು, ಅಂದರೆ ಈ ಮನೆಯ ವ್ಯಾಮೋಹವನ್ನು ತೊರೆದು ಆ ಮನೆಯ ಕಡೆಗೆ ಗಮನ ಕೊಡುವ ಕಾಲ. ಪ್ರತೀ ಮನುಷ್ಯನಿಗೆ ಎರಡು ಮನೆಗಳಿವೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಮನುಷ್ಯ ಮೋಹಕ್ಕೊಳಪಟ್ಟು ಒಂದನೇ ಮನೆಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತ ಮಡದಿ, ಮಕ್ಕಳು ಹೀಗೆ ಎಲ್ಲಾ ವಿಷಯ ಸುಖಗಳಲ್ಲಿ ಮಗ್ನನಾಗಿಬಿಡುತ್ತಾನೆ. ಆದರೆ ಆತನಿಗೆ ಇನ್ನೊಂದು ಮನೆಗೆ ಹೋಗಲಿಕ್ಕಿದೆ. ಆ ಮನೆಗೆ ಅವನ ಹಿರಿಯರೆಲ್ಲಾ ಹೋಗಿರುತ್ತಾರೆ. ತನಗೂ ಅಲ್ಲಿ ಬೇಗನೆ ಹೋಗಲಿಕ್ಕಿದೆ .ಅದಕ್ಕಾಗಿ ಆ ಮನೆಯ ವ್ಯವಸ್ಥೆಗಾಗಿ ಏನಾದರೂ ಸಂಗ್ರಹಿಸು ಎಂದು ತಾತ್ಪರ್ಯ. ಅದಕ್ಕಾಗಿ ಆಧ್ಯಾತ್ಮ ಚಿಂತನೆ, ಸತ್ಕರ್ಮ ಮಾಡುವುದು, ತೀರ್ಥಕ್ಷೇತ್ರಗಳನ್ನು ಸಂದರ್ಶಿಸುವುದು. ನಾವು ಏರಿದ ಗುಡ್ಡವನ್ನು ದಕ್ಷಿಣಾ ಮುಖವಾಗಿ ಇಳಿಯುತ್ತೇವೆ. ಇಲ್ಲಿ ದಕ್ಷಿಣಾಮುಖ ಎಂಬುದು ಬಹಳ ಪ್ರಾಮುಖ್ಯವಾದ ವಿಷಯ. ಕೆಳಗಿಳಿದಾಗ ನಮಗೆ ಪ್ರಕೃತಿ ನಿರ್ಮಿತ ಸುಂದರ ಸರೋವರ ಎದುರಾಗುತ್ತದೆ. ಅದುವೇ ಸಂಸಾರ ಸರದಿ. ಅದನ್ನು ದಾಟಿದಾಗ ಪರಾತ್ಪರ ಸ್ವರೂಪಿ ಜಾಬಾಲೇಶ್ವರ ಶಿವಲಿಂಗದ ದರ್ಶನ. ಅದುವೇ ಮೋಕ್ಷ.

ಶ್ರೀ ಗುಹೆಯ ಪ್ರಾರಂಭದಿಂದ ಕೊನೆಯ ತನಕ ನಾವು ಸಾಗುವಾಗ ಸುಮಾರು ೧೮ ಅವಸ್ಥೆಗಳನ್ನು ದಾಟಬೇಕಾಗುತ್ತದೆ. ನಮ್ಮನ್ನೇ ನಾವು ಮರೆತು ಭಗವಂತನ ನಾಮಸ್ಮರಣೆ ಮಾಡುತ್ತಾ, ಧ್ಯಾನದ ಅನುಭವವು ನಮಗೆ ಆಗಿ ಎಲ್ಲವನ್ನು ಮರೆಯುತ್ತೇವೆ.

ಬನ್ನಿ, ಈ ಆನಂದವನ್ನು ಅನುಭವಿಸಿ. ಕೃತಾರ್ಥರಾಗಿ.

ಸಂಗ್ರಹ: ಎನ್. ವಿ. ಎಸ್. ಭಟ್

’ನೆಲ್ಲಿತೀರ್ಥ’ ಕೆಲವು ಪ್ರಾಚೀನ ಉಲ್ಲೇಖಗಳು
ತುಳುನಾಡಿನ ಪ್ರಾಚೀನ ದೇವಾಲಯಗಳಿಗೆಲ್ಲ ಒಂದು ಭವ್ಯ ಪರಂಪರೆಯಿದೆ. ಹಿಂದೆ ಈ ಪ್ರದೇಶವನ್ನು ಆಳಿದ್ದ ಆಳುಪ, ವಿಜಯನಗರ, ಕೆಳದಿ ಸಂಸ್ಥಾನಗಳಿಂದಲೂ, ಸ್ಥಳೀಯ ರಾಜವಂಶೀಯರಿಂದಲೂ ಆರಾಧಿಸಲ್ಪಡುತ್ತಿದ್ದ ಅನೇಕ ದೇವಾಲಯಗಳು ಇಲ್ಲಿವೆ. ದೇವಾಲಯಗಳ ವಿನಿಯೋಗಗಳು ಸಾಂಗವಾಗಿ ನಡೆಯಬೇಕೆಂಬ ಸದುದ್ದೇಶದಿಂದ, ಅಂದಿನ ಅರಸರು ಬಿಟ್ಟುಕೊಟ್ಟ ದತ್ತಿ ಶಾಸನಗಳ ಸಂಖ್ಯೆ ಅಪರಿಮಿತವಾಗಿದೆ. ಇಲ್ಲಿಯ ತುಂಡರಸರಲ್ಲಿ ಚೌಟರು ಸುಪ್ರಸಿದ್ಧರು. ಇವರು ಮೂಲತಃ ಕರಾವಳಿಯ ಉಳ್ಳಾಲದವರಾಗಿದ್ದು, ಮುಂದೆ ಪುತ್ತಿಗೆ, ಮೂಡಬಿದಿರೆಗಳಲ್ಲಿ ಕೇಂದ್ರಸ್ಥಾನವನ್ನೇರ್ಪಡಿಸಿ ರಾಜ್ಯಭಾರ ಮಾಡುತ್ತಿದ್ದರು. ಇವರು ಸೋಮನಾಥ ದೇವರ ಭಕ್ತರಾಗಿದ್ದರು. ಆದಕಾರಣದಿಂದ ಇವರು ಆಳಿಕೊಂಡಿದ್ದ ಭಾಗದಲ್ಲಿ ಅನೇಕ ಸೋಮನಾಥ ದೇವಾಲಯಗಳಿವೆ. ಉಳ್ಳಾಲ, ಪುತ್ತಿಗೆ, ಅಮ್ಮೆಂಬಳ, ಪೆರ್ಮುದೆ, ಪೋರ್ಕೋಡಿ, ಗುರುಪುರ, ಇರಾ, ನೆಲ್ಲಿತೀರ್ಥ ಮೊದಲಾದ ಸೋಮನಾಥ ದೇವಾಲಯಗಳು ಇಲ್ಲಿವೆ.

ಇವುಗಳಲ್ಲಿ ನೆಲ್ಲಿತೀರ್ಥವು ಪವಿತ್ರ ಗುಹಾತೀರ್ಥದ ಸನ್ನಿಧಿಯಲ್ಲಿದ್ದು ಅತಿಮಹಿಮಾನ್ವಿತವಾಗಿದೆ. ಪೂರ್ವಕಾಲದಲ್ಲಿ ಇದು ಜಾಬಾಲಿಮುನಿಯ ಸಿದ್ಧಾಶ್ರಮವಾಗಿತ್ತೆಂದು ಪುರಾಣೋಕ್ತಿಯಿದೆ. ಶ್ರ್‍ಈಕ್ಷೇತ್ರದಲ್ಲಿರುವ ಅರಸರ ಮಂಚ, ಅರಸುಕಟ್ಟೆಗಳು ಇಲ್ಲಿಗೆ ಚೌಟರಸರು ಆಗಾಗ ಭೇಟಿ ಕೊಡುತ್ತಿದ್ದರೆಂಬುದಕ್ಕೆ ಮೂಕಸಾಕ್ಷಿಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸವನ್ನು ಬರೆದಿರುವ ದಿ. ಗಣಪತಿರಾವ್ ಐಗಳು ತನ್ನ ಕೃತಿಯಲ್ಲಿ ಹೇಳಿರುವ ಕೆಲವು ವಿಷಯಗಳು ಮುಖ್ಯವಾಗಿವೆ. ಕ್ರಿ. ಶ ೧೪೦೩-೧೪೭೦ರ ಅವಧಿಯಲ್ಲಿದ್ದ ಎರಡನೇ ಚೆನ್ನರಾಯ ಚೌಟನು ಒಂದು ಯುದ್ಧಕಾಲದಲ್ಲಿ ಬಂಗರಸರಿಗೆ ಸೈನ್ಯ ಸಹಾಯ ಮಾಡಿ ಜಯವನ್ನು ದೊರಕಿಸಿಕೊಟ್ಟುದಕ್ಕೆ ಮಣೇಲ, ಪೇಜಾವರ, ಮುಂಡ್ಕೂರು ಸೀಮೆಗಳನ್ನು ಉಡುಗೊರೆಯಾಗಿ ಪಡೆದನು.

ಅವನು ಹಿಂತಿರುಗಿ ಬರುವಾಗ ಜಾಬಾಲಿ ಋಷಿಯ ಆಶ್ರಮವಿದ್ದ ಸ್ಥಳದಲ್ಲಿ ಗುಹಾತೀರ್ಥದಲ್ಲಿ ಸ್ನಾನಮಾಡಿ, ಆ ಋಷಿಯ ಪ್ರತಿಷ್ಠೆ ಮಾಡಿದ್ದ ಸೋಮನಾಥೇಶ್ವರ ದೇವರ ದರ್ಶನ ಮಾಡಿಕೊಂಡು ನೆಲ್ಲಿತೀರ್ಥ ಮತ್ತು ಕರಂಬಾರು ಗ್ರಾಮಗಳನ್ನು ಈ ದೇವಸ್ಥಾನಕ್ಕೆ ಉತ್ತಾರ ಬಿಟ್ಟನು ಎಂದು ಹೇಳಲಾಗಿದೆ. ಈಗಲೂ ಕೆಂಜಾರು ಕರಂಬಾರು ಗ್ರಾಮದವರು ಉತ್ಸವದ ಸಮಯದಲ್ಲಿ ಬಂದು ಅಗ್ನಿಕುಳಿಯನ್ನು ನಡೆಸಿಕೊಡುತ್ತಾರೆ. ಇದೇ ಘಟನೆಯನ್ನು ಕರ್ನಲ್ ಮೆಕೆನ್ಜಿಯೆಂಬವನ (೧೭೫೪-೧೮೨೧) ಸಂಗ್ರಹಿಸಿದ್ದ ’ಚೌಟರ ಕೈಪಿಯತ್ತು’ ಎಂಬ ದಾಖಲೆಯಲ್ಲಿಯೂ ಉಲ್ಲೇಖಿಸಲಾಗಿದೆ. ಅಲ್ಲಿ ಈ ಘಟನೆ ನಡೆದ ಕಾಲವನ್ನು ಸ್ವಲ್ಪ ಹಿಂದೆ ಎಂದು ಸೂಚಿಸಲಾಗಿದೆ. ಅಲ್ಲಿ ನೆಲ್ಲಿತೀರ್ಥವನ್ನು ’ಬಿಲ್ವವನ’ ಎಂದಿದೆ.

ಇನ್ನೊಂದು ಘಟನೆ ಕ್ರಿ.ಶ ೧೫೭೪ರಲ್ಲಿ ನೆಲ್ಲಿತೀರ್ಥ ಕ್ಷೇತ್ರದಲ್ಲಿ ನಡೆಯಿತು. ಆಗ ತಾನೆ ತುಳುನಾಡಿನಲ್ಲಿ ಬೇರು ಬಿಡುತ್ತಿದ್ದ ವೀರಶೈವ ಧರ್ಮದವರಿಗೂ, ಬ್ರಾಹ್ಮಣರಿಗೂ ದೇವತಾರಾಧನೆಯ ಕುರಿತು ವಿವಾದವೆದ್ದಿತು. ವಿಜಯನಗರ ಸಾಮ್ರಾಜ್ಯದ ವರ್ಚಸ್ಸು ಇಳಿಮುಖವಾಗಿ, ಕೆಳದಿ ಅರಸರು (ವೀರಶೈವ) ಇಲ್ಲಿ ಆಳ್ವಿಕೆ ಆರಂಭಿಸಿದ ಕಾಲವದು. ವೀರಶೈವರು ಬಾಳೇಹಳ್ಳಿಯ ಸಿಂಹಾಸನಾಧೀಶ ಕುಮಾರ ಚನ್ನಬಸವೆಂಬ ಪ್ರಭಾವಿ ವ್ಯಕ್ತಿಯಲ್ಲಿ ದೂರಿಡುವರು. ಅವನು ಈ ನ್ಯಾಯ ತೀರ್ಮಾನವನ್ನು ಮಾಡಬೇಕೆಂದು ಮೂಡಬಿದಿರೆಯ ಚೌಟವನೆ ರಾಣಿ ಅಬ್ಬಕ್ಕದೇವಿ ೨ (೧೫೪೪-೧೫೮೨)ಯ ಸನ್ನಿಧಿಗೆ ಅರಿಕೆ ಮಾಡುವನು. ಅಬ್ಬಕ್ಕ ದೇವಿಯು ಉಭಯ ಪಕ್ಷದವರನ್ನೂ ಮೂಡಬಿದಿರಿಗೆ ಕರೆಸಿ, ತುಳುನಾಡಿನ ಬೇರೆ ಅರಸರನ್ನೂ ಬರಿಸಿ, ಬಿದಿರೆಯ ಹಲರು, ಸೆಟ್ಟಿಕಾರರ ಸಮಕ್ಷಮದಲ್ಲಿ ಈ ಸಮಸ್ಯಯನ್ನು ಬಗೆಹರಿಸಿ, ಕ್ಷೇತ್ರದ ಪಾವಿತ್ರ್ಯವನ್ನು ರಕ್ಷಿಸುವಳು.

ವಿಜಯನಗರದ ಬುಕ್ಕರಾಯನ ಕಾಲದ (ಕ್ರಿ.ಶ ೧೩೬೮) ಒಂದು ಶಾಸನವು (ಶ್ರವಣ ಬೆಳಗೊಳ) ಜೈನರಿಗೂ, ಶ್ರೀ ವೈಷ್ಣವರಿಗೂ ಬಂದ ಮನಸ್ತಾಪವನ್ನು ಒಪ್ಪಂದ ಮೂಲಕ ಬಗೆಹರಿಸಿದ ವಿಷಯವನ್ನು ತಿಳಿಸುತ್ತದೆ. ಅದೇ ಆದರ್ಶ ಅಬ್ಬಕ್ಕ ದೇವಿ ಇಲ್ಲಿ ತೋರಿಸುತ್ತಾಳೆ.

ಪುರಾಣ ಯುಗದ ಜಾಬಾಲಿಯಾಶ್ರಮದ ನೆನಪನ್ನು ಬರಿಸುವ ’ನವಗ್ರಹಮಹಾಯಾಗ’ದ ಮಹೋತ್ಸವ ಕಾಲದಲ್ಲಿ ಶ್ರೀ ಕ್ಷೇತ್ರದ ಮಹಿಮೆಯನ್ನು ಸಾರುವ ಸಂಗತಿಗಳನ್ನು ಜ್ಞಾಪಿಸುವುದು ಸೂಕ್ತವೆಂದು ಇದನ್ನು ಬರೆಯಲಾಗಿದೆ.

ಆಕರಗಳು

೧. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ - ಗಣಪತಿರಾವ್ ಐಗಳು - ೧೯೨೩

೨. ಕರ್ನಾಟಕದ ಕೈಫಿಯತ್ತುಗಳು - ಸಂ.ಎಂ.ಎಂ ಕಲುಬುರ್ಗಿ - ಪ್ರ. ಕನ್ನಡ ವಿಶ್ವವಿದ್ಯಾಲಯ, ಹಂಪಿ - ೧೯೯೪

೩. ಮಂಜುವಾಣಿ - ಮಾಸಪತ್ರಿಕೆ - ಧರ್ಮಸ್ಥಳ ಜನವರಿ ೧೯೯೪ - ಶ್ರೀ ಎಸ್. ಡಿ. ಶೆಟ್ಟರ ಲೇಖನ.

- ಪು. ಶ್ರೀನಿವಾಸ ಭಟ್, ಕಟೀಲು

The 2010 Jaatre - Car Festival
The annual Utsava or Jaatre will be held from the 20th to the 25th of December 2010. All are cordially invited to attend and obtain the blessings of Lord Somanatha.

Program in brief:

20th Dec - Dhwaja hoisting, Mahaganapati Homa, Bali Utsava

21st Dec - Shatha Rudrabhishekha, Bali Utsava

22nd Dec - Shatha Rudrabhishekha, Rathothsava

23rd Dec - Kavatodghatana, Choornotsava, Dhawaja lowering

24th Dec - Shatha Rudrabhisheka, Mantrakshate

25th Dec - Shatha Rudrabhisheka, Bhoota Nemas

Annual Jaatre - 30/12/2009-03/01/2010
The Annual Jaatre is starting in a couple of days. From 30th December till 3rd January, Nellitheertha will conduct its annual car festival. Some main programs during the 5 day Jaatre are

- Dhwaja Aarohana on 30/12

- Purnima Theertha Snana on 31/12

- Rathothsava on 01/01

- Churnothsava and Dhwaja Avarohana on 02/01

- Vyaghra Chamundi Nema on 03/01

On 30/12, there is a Chandika Homa being performed. On 31/12, 01/01 and 03/01, Shatha Rudrabhishekhas will be performed.

There will be Bhajane programs in the evenings every day during the Jaatre.

There is a Carnatic Music concert by Srimati Aruna Prasanna and Srimati Soumya Narayan on 02/02 starting at 8PM.

All are welcome!

Please visit http://nellitheertha.com for more details on the temple.

Tula Sankramana - Cave reopening
|| Om Somanatheshwaraaya Namah ||

Last Saturday, on the 17th of October 2009, the Cave re-opened again. Till Mesha Sankramana in April 2010, the cave will be open for devotees, every day. Timings are from 7AM till 1PM.

For details on the procedure to visit the cave, please read the FAQ provided on the home page at http://www.nellitheertha.com

Upcoming events - October 2009 to January 2010
|| Om Somanatheshwaraaya Namah ||

* October 17th 2009 - Re-opening of temple cave

* November 2009 - Laksha Deepotsava

* December 30th 2009 - January 3rd 2010 - Annual Jaatre

* January 14th 2010 - Makara Sankramana Special Theertha Snana

Moodappa Seve - 28th Feb/01st March 2009
Sri NVGK Bhat is offering a “Moodappa Seve” to Lord Mahaganapathi on the 28th of Feb 2009.

It is a very integral part of our religion to worship God in different forms. Starting with the personal Japa and Puje, we move on to Homa, Yaga and Havana. When it comes to community worship, temples come to the fore. Even in temples, depending upon the devate being worshipped, various forms of worship are undertaken.

The most common examples that come to mind are the homas that we do. Even in the common Gana Homa, Ganapati is worshipped through fire, in the midst of Kalasha and in the Mandala. Similarly, for Durga worship, we invoke Devi in the form of light during Durga Namaskara and pray to her.

In temples, one of the methods used in worshipping the idols is to offer “services” using “instruments” that are considered favorite to the particular diety. For example, for Shiva, Rudrabhisheka is special where we offer pots of water to the Linga. Depending upon how many pots of water we offer, the seve is considered Rudra, Shatha Rudra, Maha Rudra and Ati Rudra Abhisheka. For Vishnu, we similarly offer Tulasi Sahasra Archane, Laksha Archane and so on. These kinds of worship, when done to the idol, increases the Sannidhana of the deity in the idol. The “energy” in the idol increases, thereby the sanctity of the temple increases and consequently more prayers are answered.

For Ganapati idols, one of the auspicious and rare forms of worship is known as Moodappa Seve. In this, thousands and thousands of “Appa” a sweet dish typical to Tulu Nadu (an equivalent of Modaka) is made and “offered” to the idol. The idol is literally covered with Appas. The practice is to cover the idol completely. Various other rituals follow and in fact the idol is left covered for several hours (if I am not wrong). Subsequently, the “appas” are removed and distributed to devotees as prasad. The belief is that all the appas must be distributed and none should be wasted.

In Tulu Nadu, from my gathering, the Madhur Ganapati temple in Kasaragod and the Sharavu Ganapati temple in Mangalore are two temples where this seve has happened a few times. Otherwise, this is a very rare seve.

It is definitely a defining moment in the history of Nellitheertha temple, specifically the Ganapati temple. Lord Ganapati has decided it is time for him to “shine” more and hence this day has arrived.

Upcoming events - October to January 2009
|| Om Somanatheshwaraaya Namah ||

October 27th - 30th 2008 : Deepavali Celebrations

November 16th 2008 : Laksha Deepotsava (first time in Nellitheertha)

10th to 14th January 2009 : Annual Jaatre.

Cave reopens
|| Om Somanatheshwaraaya Namah ||

The Nellitheertha Cave is now open. It will stay open for devotees till Mesha Sankramana - April 14th 2009. Everyday, the cave is open between 7AM till the afternoon Maha Puje which is usually around 1PM. From 12noon onwards, the entrance to the cave is free till the Maha Puje happens.